ಚಂದನವನದ ಚಿನ್ನಾರಿ ಮುತ್ತನಿಗೆ ಜೋಡಿಯಾದ ದಿಯಾ ಸಿನಿಮಾ ಖ್ಯಾತಿಯ ನಟಿ ಖುಷಿ

ಚಂದನವನದ ಚಿನ್ನಾರಿ ಮುತ್ತನಿಗೆ ಜೋಡಿಯಾದ ದಿಯಾ ಸಿನಿಮಾ ಖ್ಯಾತಿಯ ನಟಿ ಖುಷಿ. ಹೌದು ದಿಯಾ ಸಿನಿಮಾದ ಮೂಲಕ ಕನ್ನಡ ಸಿನಿ ಪ್ರೇಕ್ಷಕರ ಮನದಲ್ಲಿ ಸ್ಥಾನ ಗಿಟ್ಟಿಸಿಕೊಂಡ ನಟಿ ಖುಷಿ ಅವರು ಇದೀಗ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ಕೇಸ್ ಆಫ್ ಕೊಂಡಾಣ ಎಂಬ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಗರದ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಜರುಗಿದೆ. ಕೇಸ್ ಆಫ್ ಕೊಂಡಾಣ ಸಿನಿಮಾವನ್ನು ದೇವಿಪ್ರಸಾದ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಇದೇ ದೇವಿ ಪ್ರಸಾದ್ ಶೆಟ್ಟಿ ಅವರು ವಿಜಯ್ ರಾಘವೇಂದ್ರ ಅವರ ಜೊತೆ ಸೀತಾರಾಮ್ ಬಿನೊಯ್ ಎಂಬ ಸಿನಿಮಾ ನಿರ್ದೇಶನ ಮಾಡಿದ್ದರು. ಇದೀಗ ಮತ್ತೇ ವಿಜಯ್ ರಾಘವೇಂದ್ರ ಅವರೊಟ್ಟಗೆ ಸಿನಿಮಾ ಮಾಡುತ್ತಿದ್ದಾರೆ.

ನಾಯಕ ನಟ ವಿಜಯ ರಾಘವೇಂದ್ರ ಅವರು ಮಾತನಾಡಿ ಸೀತಾರಾಮ್ ಬಿನೋಯ್ ನಂತರ ಇವರು ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿರುವುದು ಸಂತೋಷ. ಸಾಧಾರಣವಾಗಿ ಒಂದೊಳ್ಳೆ ತಂಡ ಸಿಗುವುದು ಅಪರೂಪ. ದೇವಿ ಪ್ರಸಾದ್ ಶೆಟ್ಟಿ ಅವರ ಡೆಡಿಕೇಷನ್, ಕೆಲಸದ ಬಗ್ಗೆ ಅವರಗೆ ಇರುವ ಸೀರಿಯಸ್ ನಿಜಕ್ಕೂ ಮೆಚ್ಚುವಂತದ್ದು‌ ಎಂದು ಹೇಳಿದರು. ಅದೇ ರೀತಿಯಾಗಿ ಹಿರಿಯ ಪತ್ರಕರ್ತರಾದ ಜೋಗಿ ಅವರು ಮಾತನಾಡಿ ನಾನು 2015ಕ್ಕೆ ಸಿನಿಮಾ ಸ್ಕ್ರಿಪ್ಟ್ ಬರೆಯುವುದನ್ನು ನಿಲ್ಲಿಸಿಬಿಟ್ಟೆ. ಪ್ರಕಾಶ್ ರೈ ಅವರ ಇದೊಳ್ಳೆ ರಾಮಾಯಣ ಸಿನಿಮಾ ನಂತರ ಯಾವುದೇ ಚಿತ್ರಕ್ಕೆ ಬೇರೆ ಬೇರೆ ಕಾರಣಗಳಿಂದ ಸ್ಕ್ರಿಪ್ಟ್ ಬರೆದಿರಲಿಲ್ಲ. ಈ ತಂಡ ಬಂದು ಕಥೆ ಹೇಳಿದಾಗ ನಾನು ತುಂಬಾ ಎಕ್ಸೈಟ್ ಆದೆ. ಕಥೆಯನ್ನ ಬಹಳ ಸುಂದರವಾಗಿ ಪ್ರೆಸೆಂಟ್ ಮಾಡಲು ಹೊರಟಿದ್ದಾರೆ. ನಿಜವಾಗಲೂ ಬಹಳ ಸಂತೋಷವಾಗುತ್ತಿದೆ. ಪ್ರತಿಯೊಬ್ಬರೂ ಬೆಂಬಲ ಕೊಡಿ ಎಂದು ಮಾತನಾಡಿದರು.

ಕ್ರೈಮ್ ಸಿನಿಮಾಗಳ ಬಗ್ಗೆ ಹೆಚ್ಚು ಒಲವಿರುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈ ಬಾರಿ ತನಿಖಾ ಥ್ರಿಲ್ಲರ್‌ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. 09/2018 ಎಂಬ ಅಡಿ ಬರಹವಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹಾಗೂ ಭಾವನಾ ಮೆನನ್ ಇಬ್ಬರು ಪೊಲೀಸ್ ಅಧಿಕಾರಿಗಳಾಗಿ ನಟಿಸಲಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ವೈದ್ಯೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿಪ್ರಸಾದ್ ಶೆಟ್ಟಿ ಜೊತೆಗೆ ಅರವಿಂದ್ ಶೆಟ್ಟಿ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಕೇಸ್ ಆಫ್ ಕೊಂಡಾಣಕ್ಕೆ ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನವಿದೆ. ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಒಟ್ಟಾರೆಯಾಗಿ ದಿಯಾ ಸಿನಿಮಾ ಖ್ಯಾತಿಯ ನಟಿ ಖುಷಿ ಅವರು ಕನ್ನಡ ಸಿನಿ ಪ್ರೇಕ್ಷಕರ ಎದುರು ಹಲವು ದಿನಗಳ ನಂತರ ಕಾಣಿಸಿಕೊಳ್ಳುತ್ತಿದ್ದಾರೆ.

Leave a Reply

%d bloggers like this: