ಕ್ರಿಕೆಟ್ ಇತಿಹಾಸದಲ್ಲೇ ದಾಖಲೆ ಸಂಭಾವನೆ ಪಡೆಯುತ್ತಿರುವ ತರಬೇತುದಾರ ಕನ್ನಡಿಗ ರಾಹುಲ್ ದ್ರಾವಿಡ್! ಸಂಭಾವನೆ ಎಷ್ಟು ಗೊತ್ತಾ

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿರುವ ದ್ರಾವಿಡ್ ಅವರ ವಾರ್ಷಿಕ ಸಂಭಾವನೆ ಎಷ್ಟು ಗೊತ್ತಾ….? ಹೌದು ಇತ್ತೀಚೆಗೆ ತಾನೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ಹಿಂದೆ ಕೋಚ್ ಆಗಿದ್ದ ರವಿಶಾಸ್ತ್ರಿ ಅವರ ಕಾಲಾವಧಿ ಮುಗಿದ ಬಳಿಕ ಇದೀಗ ಇವರ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ಆಯ್ಕೆ ಮಾಗಲಾಗಿದೆ. ಭಾರತ ಕ್ರಿಕೆಟ್ ತಂಡದ ಮಹಾಗೋಡೆ (ದಿ ವಾಲ್) ಎಂದು ಕರೆಸಿಕೊಳ್ಳುವ ಕರ್ನಾಟಕದ ಹೆಮ್ಮೆಯ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತ ಕ್ರಿಕೆಟ್ ತಂಡದ ನಾಯಕರಾಗಿ ಮುನ್ನೆಡೆಸಿದವರು.ಕ್ರಿಕೆಟ್ ಜಗತ್ತಿನಲ್ಲಿ ಭಾರತಕ್ಕೆ ರಾಹುಲ್ ದ್ರಾವಿಡ್ ಅವರ ಕೊಡುಗೆ ಅಪಾರ. ರಾಹುಲ್ ದ್ರಾವಿಡ್ ಮೈದಾನದಲ್ಲಿ ತಮ್ಮ ಬ್ಯಾಟಿಂಗ್ ತಂತ್ರದ ಮೂಲಕ ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇಯಾದ ಒಂದು ವಿಶಿಷ್ಟ ಛಾಪನ್ನ ಮೂಡಿಸಿದ್ದಾರೆ.

ಅಂತರಾಷ್ಟೀಯ ಪಂದ್ಯಗಳಲ್ಲಿ 24,177 ರನ್ ಗಳಿಸಿರುವ ರಾಹುಲ್ ದ್ರಾವಿಡ್ ಅವರು 2005 ರಿಂದ 2007 ರವರೆಗೆ ಭಾರತ ತಂಡದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ದ್ರಾವಿಡ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಭಾರತ ತಂಡದ ಕೋಚ್ ಆಗಿ ಆಯ್ಕೆ ಆಗಿದ್ದು, ಕೋಚ್ ಹುದ್ದೆಗೆ ಬಿಸಿಸಿಐ ದ್ರಾವಿಡ್ ಅವರಿಗೆ ಬರೋಬ್ಬರಿ ಹತ್ತು ಕೋಟಿ ಸಂಭಾವನೆ ನೀಡುತ್ತಾರೆ ಎಂದು ತಿಳಿದು ಬಂದಿದೆ. ಇದಕ್ಕೂ ಮುನ್ನ ಭಾರತ ತಂಡದ ಕೋಚ್ ಆಗಿ ರವಿ ಶಾಸ್ತ್ರಿ ಅವರು ಕಾರ್ಯ ನಿರ್ವಹಿಸುತ್ತಿದ್ದರು‌. ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಶಾಸ್ತ್ರಿ ಅವರು 2019 ರ ಅವಧಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದರು.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರವಿ ಶಾಸ್ತ್ರಿ ಅವರಿಗೆ ವಾರ್ಷಿಕವಾಗಿ ಬರೋಬ್ಬರಿ ಎಂಟರಿಂದ ಒಂಭತ್ತು ಕೋಟಿ ರೂ ಸಂಭಾವನೆ ನೀಡುತ್ತಿತ್ತು. ಇದೀಗ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವರ ಹುದ್ದೆಗೆ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆ ಆಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಈ ವರ್ಷದಿಂದ ಸಂಭಾವನೆ ಹೆಚ್ಚಳ ಮಾಡಿದ್ದು ರಾಹುಲ್ ದ್ರಾವಿಡ್ ಅವರಿಗೆ ವರ್ಷಕ್ಕೆ ಬರೋಬ್ಬರಿ ಹತ್ತು ಕೋಟಿ ನೀಡುವುದಾಗಿ ಒಪ್ಪಂದ ಮಾಡಿಕೊಂಡಿದೆಯಂತೆ. ಇದೀಗ ಮುಖ್ಯ ತರಬೇತುದಾರರಾಗಿ ಅತಿ ಹೆಚ್ಚು ಸಂಭಾವನೆ ಪಡೆಯುವ ಕೋಚ್ ಎಂಬ ಕೀರ್ತಿಗೆ ಕನ್ನಡಿಗ ರಾಹುಲ್ ದ್ರಾವಿಡ್ ಪಾತ್ರರಾಗಿದ್ದಾರೆ.

Leave a Reply

%d bloggers like this: