ಇದೇ ಮೊಟ್ಟ ಮೊದಲ ಬಾರಿಗೆ ಟಾಲಿವುಡ್ ಗೆ ವಿಲನ್ ಆಗಿ ಎಂಟ್ರಿ ಕೊಡಲಿದ್ದಾರೆ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ನಟ

ಇದೇ ಮೊಟ್ಟ ಮೊದಲ ಬಾರಿಗೆ ಟಾಲಿವುಡ್ ಗೆ ವಿಲನ್ ಆಗಿ ಎಂಟ್ರಿ ಕೊಡಲಿದ್ದಾರೆ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ನಟ..! ಕನ್ನಡದ ಅನೇಕ ನಟ-ನಟಿಯರು ಈಗಾಗಲೇ ಪರಭಾಷಾ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಅಷ್ಟೇ ಅಲ್ಲದೆ ದಕ್ಷಿಣ ಭಾರತೀಯ ಚಿತ್ರರಂಗದಾದ್ಯಂತ ಭಾರಿ ಸದ್ದು ಮಾಡುತ್ತಿದ್ದಾರೆ. ಕನ್ನಡದ ನಟಿಯರು ಪರಭಾಷಾ ಸಿನಿಮಾಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅವಕಾಶ ಗಿಟ್ಟಿಸಿಕೊಂಡು ಯಶಸ್ವಿಯಾಗಿದ್ದಾರೆ. ಕಿಚ್ಚ ಸುದೀಪ್,ರಿಯಲ್ ಸ್ಟಾರ್ ಉಪೇಂದ್ರ,ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ನಟಿಯರಾದ ರಶ್ಮಿಕಾ ಮಂದಣ್ಣ, ನಭಾ ನಟೇಶ್,ಶ್ರೀ ಲೀಲಾ ಕೂಡ ಪರಭಾಷಾ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ಇವರ ಸಾಲಿಗೆ ಸ್ಯಾಂಡಲ್ ವುಡ್ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಕೂಡ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.ಹೌದು ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಹೊಸ ಚಿತ್ರಕ್ಕೆ ಖಡಕ್ ವಿಲನ್ ಆಗಿ ದುನಿಯಾ ವಿಜಯ್ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ತೆಲುಗು ಸಿನಿ ರಂಗದ ಪ್ರಸಿದ್ದ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿರುವ ಅಖಂಡ ಎಂಬ ಚಿತ್ರಕ್ಕೆ ದುನಿಯಾ ವಿಜಯ್ ಅವರನ್ನ ವಿಲನ್ ಆಗಿ ನಟಿಸುವುದಕ್ಕೆ ಕರೆ ಬಂದಿದೆಯಂತೆ. ಬಾಲಕೃಷ್ಣ ಅವರು ನಾಯಕ ನಟರಾಗಿ ನಟಿಸುತ್ತಿರುವ ಬೊಯಪಾಟಿ ಶ್ರೀನು ನಿರ್ದೇಶನದ ಅಖಂಡ ಸಿನಿಮಾದಲ್ಲಿ ವಿಜಯ್ ಅವರಿಗೆ ವಿಲನ್ ಆಗುವ ಅವಕಾಶ ಒದಗಿ ಬಂದಿದೆ. ಸ್ಟಾರ್ ನಟ ಬಾಲಕೃಷ್ಣ ಅವರ ಸಿನಿಮಾದಲ್ಲಿ ವಿಲನ್ ಆಗಿ ನಟಿಸಲು ಅವಕಾಶ ಬಂದಿರುವುದರಿಂದ ನಟ ದುನಿಯಾ ವಿಜಯ್ ಅವರು ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತಾನೇ ನಟ ದುನಿಯಾ ವಿಜಯ್ ಸಲಗ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಕಳೆದ ತಿಂಗಳು ಬಿಡುಗಡೆಯಾದ ಸಲಗ ಸಿನಿಮಾ ರಿಲೀಸ್ ಆಗಿ ಉತ್ತಮ ಮೆಚ್ಚುಗೆ ಪಡೆದುಕೊಂಡಿದೆ.

ಈ ನಮ್ಮ ಲೇಖನ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಮತ್ತು ಲೈಕ್ ಮಾಡಿ. ಈ ನಮ್ಮ ಲೇಖನದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ನಮಗೆ ತಿಳಿಸಿ. ಮತ್ತಷ್ಟು ಹೊಸ ಹೊಸ ಸುದ್ದಿಗಳಿಗಾಗಿ ನಮ್ಮ ಪೇಜ್ ನ್ನು ತಪ್ಪದೆ ಲೈಕ್ ಮಾಡಿ.

Leave a Reply

%d bloggers like this: