ಇದೇ ವಾರ ಬಿಡುಗಡೆ ಆಗುತ್ತಿದೆ ಕನ್ನಡದ ಬಿಗ್ ಬಾಸ್ ಸ್ಪರ್ಧಿಯ ಹೊಸ ಚಿತ್ರ

ಸ್ಯಾಂಡಲ್ ವುಡ್ ನಲ್ಲಿ ಇದೇ ಆಗಸ್ಟ್ 26ಕ್ಕೆ ಸಾಲು ಸಾಲು ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳು ರಿಲೀಸ್ ಆಗುತ್ತಿವೆ. ಹೌದು ಚಂದನವನದಲ್ಲಿ ಇತ್ತೀಚೆಗೆ ಹೊಸಬರದ್ದೇ ದರ್ಬಾರ್ ಆಗಿದೆ. ಕಂಟೆಂಟ್ ಓರಿಯೆಂಟೆಡ್ ಸಿನಿಮಾಗಳು ಕನ್ನಡದಲ್ಲಿ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಅದ್ರಂತೆ ಇದೀಗ ಕನ್ನಡದಲ್ಲಿ ಕಂಟೆಂಟ್ ಓರಿಯೆಂಟೆಡ್ ಸಾಲು ಸಾಲಾಗಿ ಬರುತ್ತಿವೆ. ನಾವು ಯಾರಿಗೂ ಕಡಿಮೆ ಇಲ್ಲ ಅನ್ನೋದನ್ನ ಕನ್ನಡ ಚಿತ್ರಗಳು ಪ್ರೂವ್ ಮಾಡುತ್ತಿವೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳ ಸಾಲಿಗೆ ಕೌಟಿಲ್ಯ ಚಿತ್ರ ಕೂಡ ಸೇರ್ಪಡೆಗೊಳ್ಳುತ್ತಿದೆ. ಬಿಗ್ ಬಾಸ್ ಓಟಿಟಿ ನಲ್ಲಿ 13ನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರೋ ಕಿರುತೆರೆ ನಟ ಮತ್ತು ರಾಜಕೀಯ ರಂಗದಲ್ಲಿ ತೊಡಗಿಸಿಕೊಂಡಿರುವ ಅರ್ಜುನ್ ರಮೇಶ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ರಮೇಶ್ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡು ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದಿಂದಾನೇ ನಟನೆಯ ಜೊತೆಗೆ ಪುರಸಭೆ ಸದ್ಯಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೌಟಿಲ್ಯ ಸಿನಿಮಾದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಚಿಂಚೋಳಿ ಕಾಣಿಸಿಕೊಂಡಿದ್ದಾರೆ. ಪತ್ರಕರ್ತೆಯಾಗಿ ಪ್ರಿಯಾಂಕಾ ನಟಿಸಿದ್ದಾರಂತೆ. ನಟ ಅರ್ಜುನ್ ರಮೇಶ್ ಅವರು ಆರ್ಕಿಟೆಕ್ಟ್ ಪಾತ್ರದಲ್ಲಿ ನಟಿಸಿದ್ದಾರಂತೆ. ಕೌಟಿಲ್ಯ ಚಿತ್ರಕ್ಕೆ ವಿಜೇಂದ್ರ ಬಿಎ ಅವರು ಬಂಡವಾಳ ಹೂಡಿದ್ದು, ಪ್ರಭಾಕರ್ ಶೇರಖಾನೆ ಅವರು ನಿರ್ದೇಶನ ಮಾಡಿದ್ದಾರೆ. ಈ ಕೌಟಿಲ್ಯ ಸಿನಿಮಾದ ಟ್ರೇಲರ್ ನೋಡಿರೋ ನಿರ್ದೇಶಕ ಸೂರಿ, ರಕ್ಷಿತ್ ಶೆಟ್ಟಿ ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾ ಇದೇ ಆಗಸ್ಟ್ 26ರಂದು ರಿಲೀಸ್ ಆಗುತ್ತಿದ್ದು, ಚಿತ್ರತಂಡ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರ ನೋಡಿದ ನಂತರ ಸಿನಿ ಪ್ರೇಕ್ಷಕರು ಏನು ಹೇಳುತ್ತಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ.