ಕನ್ನಡದ ಅತ್ಯಂತ ದೊಡ್ಡ ಬಜೆಟ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆ, ಹೊಸ ಲುಕ್ ಅಲ್ಲಿ ಧ್ರುವ ಸರ್ಜಾ ಅವರು

ಕನ್ನಡದ ಬಹು ನಿರೀಕ್ಷಿತ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ರಿವೀಲ್! ಕಳೆದ ಕೆಲವು ದಿನಗಳಿಂದ ಭಾರಿ ಸುದ್ದಿ ಮಾಡಿದ್ದ ಜೋಗಿ ಪ್ರೇಮ್ ಅವರ ಹೊಸ ಚಿತ್ರದ ಶೀರ್ಷಿಕೆ ಈಗ ಎಲ್ಲೆಡೆ ಭಾರಿ ಸೌಂಡ್ ಮಾಡುತ್ತಿದೆ. ಏಕ್ ಲವ್ ಯಾ ಸಿನಿಮಾದ ನಂತರ ಹ್ಯಾಟ್ರಿಕ್ ಡೈರೆಕ್ಟರ್ ಪ್ರೇಮ್ ಅವರ ಹೊಸ ಸಿನಿಮಾ ಯಾವುದು ಎಂದು ಅವರ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆಗ ಹೊರ ಬಿದ್ದ ಸುದ್ದಿಯೇ ಆಕ್ಷನ್ ಪ್ರಿನ್ಸ್ ಜೊತೆ ಪ್ರೇಮ್ ಸಿನಿಮಾ ಮಾಡುತ್ತಿದ್ದಾರೆ ಎಂಬುದು. ಯಾವಾಗ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಕಾಂಬಿನೇಶನ್ ನಲ್ಲಿ ಸಿನಿಮಾ ಬರ್ತಿದೆ ಅಂತ ಗೊತ್ತಾಯ್ತೋ ಆಗ ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಕೂಡಾ ಹೆಚ್ಚಾಯ್ತು. ಅದರಲ್ಲಿಯೂ ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ಜೋಗಿ ಪ್ರೇಮ್‌ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರೋದು ಪ್ಯಾನ್ ಇಂಡಿಯಾ ಸಿನಿಮಾ ಅಂತ ತಿಳಿದ ನಂತರ ಈ ಚಿತ್ರ ಮತ್ತಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು.

ಜೋಗಿ ಪ್ರೇಮ್ ಅಂದಾಕ್ಷಣ ಅವರ ಸಿನಿಮಾದ ಟೈಟಲ್ ಇಂದ ಹಿಡಿದು ಸಿನಿಮಾ ರಿಲೀಸ್ ಆಗೋವರ್ಗೂ ಒಂದು ರೀತಿಯಾಗಿ ಸಿನಿ ಪ್ರೇಕ್ಷಕರಲ್ಲಿ ಸಖತ್ ಕ್ರೇಜ಼್ ಹುಟ್ಟಿಸಿರುತ್ತಾರೆ. ಅದರಂತೆ ಈ ಚಿತ್ರದ ಟೈಟಲ್ ಅಲ್ಲೂ ಕೂಡ ಸಖತ್ ಕ್ರೇಜ಼್ ಹುಟ್ಟುವಂತೆ ಮಾಡಿದ್ದಾರೆ. ಅದರಂತೆ ಇದೀಗ ಈ ಹೊಸ ಚಿತ್ರದ ಟೈಟಲ್ ಅನೌನ್ಸ್ ಆಗಿದೆ. ನಿನ್ನೆ ತಾನೇ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟೈಟಲ್ ಟೀಸರ್ ಲಾಂಚ್ ಆಗಿದೆ.
ಜೋಗಿ ಪ್ರೇಮ್ ಮತ್ತು ಆಕ್ಷನ್ ಧೃವಸರ್ಜಾ ಜೋಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾಗೆ ಕೆಡಿ ಎಂದು ಟೈಟಲ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟೈಟಲ್ ಟೀಸರ್ ರಿಲೀಸ್ ಮಾಡಿ, ಚಿತ್ರತಂಡ ಈ ವಿಚಾರವನ್ನು ಹಂಚಿಕೊಂಡಿದೆ. ಬಾಲಿವುಡ್‌ ನಟ ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಟೈಟಲ್ ಟೀಸರ್ ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಕೆಜಿಎಫ್‌2 ಚಿತ್ರದಲ್ಲಿ ಅಧೀರ ಪಾತ್ರ ಮಾಡಿದ್ದ ಸಂಜಯ್ ದತ್ ಇಲ್ಲಿ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾ 1970ರಲ್ಲಿ ನಡೆದ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದೆ. ಬೆಂಗಳೂರಿನಲ್ಲಿ ನಡೆದ ಈ ಕಥೆ ರೋಚಕವಾಗಿದ್ದು, ನೈಜವಾಗಿ ತೆರೆಮೇಲೆ ತರುವ ಪ್ರಯತ್ನ ಮಾಡಲಿದ್ದೇನೆ. ಸದ್ಯ ‘ಕೆಡಿ’ ಎಂದು ಟೈಟಲ್ ಅನೌನ್ಸ್ ಮಾಡಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಹಾಗಾಗಿ, ಪರಭಾಷೆಯ ಕಲಾವಿದರು ಕೂಡ ಇರಲಿದ್ದಾರೆ. ಪಾತ್ರಕ್ಕೆ ಹೊಂದಿಕೆ ಆಗುವುದರಿಂದ ಅವರನ್ನು ಆಯ್ಕೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಅವರೆಲ್ಲ ಯಾರು ಎಂಬುದನ್ನು ಹೇಳಲಿದ್ದೇವೆ ಎಂದು ನಿರ್ದೇಶಕ ಪ್ರೇಮ್ ಹೇಳಿದರು.

ಮಚ್ಚು ಹಿಡಿದು ಖಡಕ್ ಆಗಿ ಪೋಸ್ ನೀಡಿರುವ ನಟ ಧ್ರುವ ಸರ್ಜಾ, ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಂಡಿದ್ದಾರಂತೆ. ಈಗಾಗಲೇ ಅವರು 7 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಧ್ರುವ ರೆಟ್ರೋ ಶೈಲಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಇದೊಂದು ಮಾಸ್ ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ಕಾಳಿದಾಸ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಪರಭಾಷೆಯ ಪತ್ರಕರ್ತರ ಎದುರು ತಮ್ಮ ಪರಿಚಯ ಮಾಡಿಕೊಂಡ ಧ್ರುವ, ಇದು ನಾನಿನ್ನೂ ಕೇವಲ 5 ಸಿನಿಮಾ ಮಾಡಿರುವ ನಟ. ಇದು ನನ್ನ 6ನೇ ಸಿನಿಮಾ. ನಾನು ಹುಟ್ಟಿದ್ದು, ಆರನೇ ತಾರೀಖು. ನನ್ನ ಲಕ್ಕಿ ನಂಬರ್ ಆರು. ಹಾಗೆಯೇ ಇದು ನನ್ನ 6ನೇ ಚಿತ್ರ. ಇದಿನ್ನೂ ಆರಂಭ ಅಷ್ಟೇ. ಚಿತ್ರೀಕರಣಕ್ಕಾಗಿ ಕಾಯುತ್ತಿದ್ದೇನೆ’ ಎಂದು ಧ್ರುವ ಸರ್ಜಾ ಹೇಳಿದರು.

ಕೆಡಿ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ತಮಿಳು ಟೈಟಲ್ ಟೀಸರ್‌ಗೆ ವಿಜಯ್‌ ಸೇತುಪತಿ ಧ್ವನಿ ನೀಡಿದ್ದಾರೆ. ಮಲಯಾಳಂ ಟೈಟಲ್ ಟೀಸರ್‌ಗೆ ಮೋಹನ್‌ಲಾಲ್‌ ಹಾಗೂ ಹಿಂದಿ ಟೈಟಲ್ ಟೀಸರ್‌ಗೆ ಸಂಜಯ್‌ ದತ್‌ ಅವರು ಧ್ವನಿ ನೀಡಿದ್ದಾರೆ. ಕೆವಿನ್‌ ಪ್ರೊಡಕ್ಷನ್‌ನಲ್ಲಿ ಮೂಡಿಬರುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಪ್ರೇಮ್ ಅವರ 9ನೇ ಸಿನಿಮಾ ಈ ಕೆಡಿ. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಲಿದ್ದು, ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್‌ ಛಾಯಾಗ್ರಹಣ ಮಾಡಲಿದ್ದಾರೆ. ಇನ್ನೇನಿದ್ರು ಕೆ.ಡಿ.ಚಿತ್ರದ ಹೆಚ್ಚಿನ ಅಪ್ ಡೇಟ್ಸ್ ಅನ್ನ ನಿರ್ದೇಶಕ ಜೋಗಿ ಪ್ರೇಮ್ ನೀಡಬೇಕಾಗುತ್ತದೆ. ಕೆ.ವಿ.ಎನ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಈ ಕೆ.ಡಿ.ಸಿನಿಮಾ ಕನ್ನಡದ ಅತಿ ದೊಡ್ಡ ಬಜೆಟ್ ಹೊಂದಿರುವ ಸಿನಿಮಾ ಅಂತಾನೇ ಹೇಳಲಾಗ್ತಿದೆ.

Leave a Reply

%d bloggers like this: