ಕೊನೆಗೂ ಮದುವೆ ಬಗ್ಗೆ ಸಿಹಿಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ..ನೋಡಿ ಒಮ್ಮೆ ಸಿಹಿಸುದ್ದಿ

ಧಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನೋಡೋಣ. ಬಣ್ಣದ ಲೋಕಕ್ಕೆ ಹೆಜ್ಜೆ ಇಟ್ಟ ಅತ್ಯಂತ ಕಡಿಮೆ ಅವಧಿಯಲ್ಲಿ ಇಡೀ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ಜನಪ್ರಿಯ ನಟಿಯಾಗಿ ಮಿಂಚುತ್ತಿರುವ ನಟಿ ಅಂದರೆ ಅದು ಕನ್ನಡತಿ ನಟಿ ರಶ್ಮಿಕಾ ಮಂದಣ್ಣ. ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಸಿನಿಮಾಗಳು ಯಾವ ಮಟ್ಟಿಗೆ ಸೂಪರ್ ಹಿಟ್ ಆಗಿ ಸದ್ದು ಮಾಡುತ್ತವೋ, ಅಷ್ಟೇ ದೊಡ್ಡ ಪ್ರಮಾಣದಲ್ಲಿ ಅವರ ಕೆಲವು ನಡವಳಿಕೆ ವಿಚಾರಗಳಿಂದ, ಚರ್ಚೆಗೆ ಗ್ರಾಸವಾಗುವಂತಹ ಹೇಳಿಕೆಗಳಿಂದ ಭಾರಿ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ವೀವ್ ಆಗಿರುವ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಕೆಲವು ಅನಗತ್ಯ ಮಾತುಗಳಿಂದ ಆಗಾಗ ಭಾರಿ ಟ್ರೋಲ್ ಆಗುತ್ತಾರೆ.

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಹೆಜ್ಜೆ ಇಟ್ಟ ರಶ್ಮಿಕಾ ಮಂದಣ್ಣ ಇಂದು ಕನ್ನಡ ಮಾತ್ರ ಅಲ್ಲದೆ ತೆಲುಗು, ತಮಿಳು ಮತ್ತು ಹಿಂದಿ ಭಾಷೆಯಲ್ಲಿಯೂ ಕೂಡ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಜೋಡಿಯಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಅವರು ತಮ್ಮ ಜೀವನದ ಬಾಳ ಸಂಗಾತಿಯಾಗಿ ರಕ್ಷಿತ್ ಶೆಟ್ಟಿ ಅವರನ್ನ ಪಡೆಯುವ ನಿರ್ಧಾರಕ್ಕೆ ಬಂದಿದ್ದರು.ಅದರಂತೆ ಕುಟುಂಬದವರ ಒಪ್ಪಿಗೆ ಪಡೆದು ನಟ ರಕ್ಷಿತ್ ಶೆಟ್ಟಿ ಮತ್ತು ನಟಿ ರಶ್ಮಿಕಾ ಮಂದಣ್ಣ ಇಬ್ಬರು ಕೂಡ ಅದ್ದೂರಿಯಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡರು. ತದ ನಂತರ ಕೆಲವು ವೈಯಕ್ತಿಕ ಕಾರಣಗಳಿಂದ ಇಬ್ಬರು ಕೂಡ ಪರಸ್ಪರ ದೂರ ಆದರು.

ಇದೀಗ ಇಬ್ಬರು ಕೂಡ ತಮ್ಮ ಸಿನಿ ವೃತ್ತಿ ಜೀವನದಲ್ಲಿ ತೊಡಗಿಕೊಂಡಿದ್ದು ಸಿನಿಮಾ ಮಾಡಿ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಅವರು ನಟನೆ, ನಿರ್ದೇಶನ, ನಿರ್ಮಾಣ ಹೀಗೆ ಎಲ್ಲಾ ವಿಭಾಗದಲ್ಲಿಯೂ ತೊಡಗಿಕೊಂಡು ಕಾರ್ಯ ನಿರತರಾಗಿದ್ದಾರೆ. ಇತ್ತ ಅದೇ ರೀತಿಯಾಗಿ ನಟಿ ರಶ್ಮಿಕಾ ಮಂದಣ್ಣ ಸಿಕ್ಕಾಪಟ್ಟೆ ಸ್ಟಾರ್ ಢಮ್ ಬೆಳೆಸಿಕೊಂಡು ದಕ್ಷಿಣ ಭಾರತ ಚಿತ್ರರಂಗವನ್ನು ಆಳುತ್ತಿದ್ದಾರೆ ಎಂದರೆ ತಪ್ಪಾಗಲಾರದು. ರಶ್ಮಿಕಾ ಮಂದಣ್ಣ ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರ ಜೊತೆ ಕೂಡ ನಟಿಸಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ತಮ್ಮ ಸೌಂದರ್ಯದ ಮೂಲಕ ನ್ಯಾಷನಲ್ ಕ್ರಶ್ ಎಂದು ಕರೆಸಿಕೊಂಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಅವರ ಜೊತೆ ಸಂಬಂಧ ಮುರಿದುಕೊಂಡ ಮೇಲೆ ತೆಲುಗಿನ ನಟ ವಿಜಯ್ ದೇವರ ಕೊಂಡ ಅವರ ಜೊತೆ ಆಗಾಗ ಜೊತೆಯಾಗಿ ಕಾಣಿಸಿಕೊಂಡು ಇವರಿಬ್ಬರ ಬಗ್ಗೆ ಸೌತ್ ಸಿನಿ ರಂಗದಲ್ಲಿ ಗಾಸಿಪ್ ಗಳು ಕೇಳಿ ಬರುತ್ತಿವೆ. ಹೊಸ ವರ್ಷವನ್ನು ವಿಜಯ್ ದೇವರಕೊಂಡ ಅವರೊಂದಿಗೆ ಆಚರಿಸಿದ್ದರು. ಅಷ್ಟೇ ಅಲ್ಲದೆ ಆಗಾಗ ಇಬ್ಬರು ಒಟ್ಟಿಗೆ ಕೆಲವೊಮ್ಮೆ ರೆಸ್ಟೋರೆಂಟ್ ಗಳಲ್ಲಿ ಕಾಣಿಸಿಕೊಂಡಿದ್ದರು. ಗೀತಾ ಗೋವಿಂದಂ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿತ್ತು.

ಇದೀಗ ರಶ್ಮಿಕಾ ಮಂದಣ್ಣ ಅವರ ಮದುವೆಯ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸುದ್ದಿ ಆಗುತ್ತಿವೆ. ಆದರೆ ತಮ್ಮ ಮದುವೆಯ ಬಗ್ಗೆ ರಶ್ಮಿಕಾ ಮಂದಣ್ಣ ಅವರು ನಾನು ಮದುವೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಷ್ಟು ದೊಡ್ಡವಳಲ್ಲ. ಇದರ ಬಗ್ಗೆ ನಾನು ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಈ ನಮ್ಮ ಲೇಖನ ನಿಮಗೆ ಇಷ್ಟವಾದಲ್ಲಿ ಲೈಕ್ ಮಾಡಿ ಮತ್ತು ಶೇರ್ ಮಾಡಿ. ಮತ್ತಷ್ಟು ಹೊಸ ಸುದ್ದಿಗಳಿಗಾಗಿ ನಮ್ಮ ಪೇಜ್ ನ್ನು ತಪ್ಪದೆ ಲೈಕ್ ಮಾಡಿ.