ಮಗು ಹುಟ್ಟಿದ ಸಂಭ್ರಮದಲ್ಲಿ ಎತ್ತಿ ಮುದ್ದಾಡಿದ ನಿಖಿಲ್! ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ

ಮಣ್ಣಿನ ಮಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.ಹೌದು ಇತ್ತೀಚೆಗೆ ತಾನೇ ಎಚ್.ಡಿ.ಕುಮಾರ ಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರ್ ತಮ್ಮ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿದ್ದರು.ಬೆಂಗಳೂರಿನ ಖಾಸಗಿ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ರೇವತಿ ನಿಖಿಲ್ ಕುಮಾರ್ ಅವರ ಸೀಮಂತ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೆಗೌಡ ಮತ್ತು ಚೆನ್ನಮ್ಮ ದಂಪತಿ,ಎಚ್.ಡಿ.ಕುಮಾರ ಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ದಂಪತಿ, ರೇವಣ್ಣ ಮತ್ತು ಭವಾನಿ ದಂಪತಿ ಸೇರಿದಂತೆ ದೊಡ್ಡ ಗೌಡರ ಕುಟುಂಬ ಜೊತೆಗೆ ಅವರ ಆಪ್ತಿಷ್ಟರು ಭಾಗವಹಿಸಿ ರೇವತಿ ಅವರಿಗೆ ಶುಭ ಹಾರೈಸಿದ್ದರು.

ಇದೀಗ ರೇವತಿ ನಿಖಿಲ್ ಕುಮಾರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ರೇವತಿ ಮತ್ತು ಮಗು ಇಬ್ಬರು ಕೂಡ ಆರೋಗ್ಯವಾಗಿದ್ದಾರೆ.ಇನ್ನು ಗಂಡು ಮಗು ಜನಿಸಿ ಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ದೇವೇಗೌಡರ ಕುಟಂಬದಲ್ಲಿ ಸಂಭ್ರಮ ಮನೆ ಮಾಡಿದೆ.ಇನ್ನು ಹೆರಿಗೆಯ ಸಂಧರ್ಭದಲ್ಲಿ ಆಸ್ಪತ್ರೆಯಲ್ಲಿಯೇ ಇದ್ದ ನಿಖಿಲ್ ಕುಮಾರ್ ತಮ್ಮ ಪತ್ನಿ ರೇವತಿ ಮತ್ತು ಮಗುವನ್ನು ನೋಡಿ ಸಂತಸ ಪಟ್ಟಿದ್ದಾರೆ.ನಿಖಿಲ್ ಕುಮಾರ್ ತಮ್ಮ ಮುದ್ದಾದ ಗಂಡು ಮಗುವನ್ನ ಎತ್ತಿ ಮುದ್ದಾಡುತ್ತಿರುವ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಫೋಟೋಗೆ ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ನಿಖಿಲ್ ಕುಮಾರ್ ದಂಪತಿಗಳಿಗೆ ಶುಭಾಶಯ ತಿಳಿಸಿದ್ದಾರೆ. ನಿಮಗೂ ಇಷ್ಟ ಆದ್ರೆ ಲೈಕ್ ಮಾಡಿ ಮತ್ತು ಶೇರ್ ಮಾಡಿ. ಮತ್ತಷ್ಟು ಹೊಸ ಹೊಸ ಸುದ್ದಿಗಳಿಗಾಗಿ ನಮ್ಮ ಪೇಜ್ ನ್ನು ತಪ್ಪದೆ ಲೈಕ್ ಮಾಡಿ.