ಮ್ಯಾಕ್ಸ್ ವೆಲ್ ಮದುವೆ ಕಾರ್ಡ್ ನೋಡಿ ಇಡೀ ದೇಶವೇ ಬೆಚ್ಚಿಬಿದ್ದಿದೆ.. ಅಂತಹದು ಏನಿದೆ ಗೊತ್ತಾ? ನೋಡಿ ಒಮ್ಮೆ

ತಮಿಳುನಾಡಿನ ಅಳಿಯನಾಗಲಿದ್ದಾರೆ ಆಸ್ಟ್ರೇಲಿಯಾದ ಪ್ರಸಿದ್ದ ಕ್ರಿಕೆಟಿಗ..! ಸಾಮಾನ್ಯವಾಗಿ ಕ್ರೀಡಾ ಕ್ಷೇತ್ರದಲ್ಲಿರುವ ಅನೇಕ ಕ್ರೀಡಾ ಪಟುಗಳು ತಮ್ಮ ಕ್ಷೇತ್ರವನ್ನು ಹೊರತು ಪಡಿಸಿ ಬೇರೆ ಕ್ಷೇತ್ರದಲ್ಲಿರುವ ವ್ಯಕ್ತಿಯನ್ನ ಪ್ರೀತಿಸಿ ಮದುವೆ ಆಗುತ್ತಾರೆ. ಈ ಕ್ರೀಡಾ ಲೋಕದ ಒಂದಷ್ಟು ಮಂದಿ ಅಂತೂ ಸಿನಿಮಾ ಸೆಲೆಬ್ರಿಟಿಗಳ ಜೊತೆ ಡೇಟಿಂಗ್ ಲವ್ ಅಂತ ನಡೆಸುತ್ತಿರುತ್ತಾರೆ. ಅದರಂತೆ ಇದೀಗ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ ವೆಲ್ ಅವರು ತಮಿಳುನಾಡು ಮೂಲದ ಫಾರ್ಮಸಿಸ್ಟ್ ವಿನಿ ರಾಮನ್ ಎಂಬುವವರನ್ನ ಪ್ರೀತಿಸಿ ಮದುವೆ ಆಗುತ್ತಿದ್ದಾರೆ. ವಿನಿ ರಾಮನ್ ಮತ್ತು ಗ್ಲೆನ್ ಮ್ಯಾಕ್ಸವೆಲ್ ಅವರು ಕಳೆದ ವರ್ಷ ಭಾರತೀಯ ಸಂಪ್ರದಾಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ನಿಶ್ಚಿತಾರ್ಥವಾದ ಫೋಟೋವನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಗ್ಲೆನ್ ಮ್ಯಾಕ್ಸವೆಲ್ ಅವರು ಶೇರ್ ಮಾಡಿಕೊಂಡಿದ್ದರು. ಗ್ಲೆನ್ ಮ್ಯಾಕ್ಸವೆಲ್ ಅವರು ಆಸ್ಟ್ರೇಲಿಯಾ ತಂಡದ ಆಲ್ ರೌಂಡರ್ ಆಟಗಾರರಾಗಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ.

ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಗ್ಲೆನ್ ಮ್ಯಾಕ್ಸವೆಲ್ ಅವರು ಐಪಿಎಲ್ 14 ನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಆರ್ಸಿಬಿ ತಂಡ ರಿಟೈನ್ ನಿಯಮದಡಿಯಲ್ಲಿ ಗ್ಲೆನ್ ಮ್ಯಾಕ್ಸವೆಲ್ ಅವರನ್ನ ಉಳಿಸಿಕೊಂಡಿತ್ತು. ಇದೀಗ ಗ್ಲೆನ್ ಮ್ಯಾಕ್ಸ್ ವೆಲ್ ಅವರು ಫಾರ್ಮಸಿಸ್ಟ್ ಆಗಿರುವ ವಿನಿ ರಾಮನ್ ಅವರನ್ನ ವಿವಾಹ ಆಗುತ್ತಿದ್ದಾರೆ. ಇದೇ ಮಾರ್ಚ್ 27 ರಂದು ವೈವಾಹಿಕ ಜೀವನಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಅದು ಏನಪ್ಪಾ ಅಂದರೆ ಗ್ಲೆನ್ ಮ್ಯಾಕ್ಸವೆಲ್ ಮತ್ತು ವಿನಿ ರಾಮನ್ ಅವರ ವಿವಾಹ ಆಹ್ವಾನ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಆಹ್ವಾನ ಪತ್ರಿಕೆ ತಮಿಳು ಭಾಷೆಯಲ್ಲಿ ಮುದ್ರಿತವಾಗಿದೆ.

ಬಲ್ಲ ಮೂಲಗಳ ಪ್ರಕಾರ ತಮಿಳು ಕ್ರಿಶ್ಚಿಯನ್ ಸಂಪ್ರದಾಯದಂತೆ ಇವರಿಬ್ಬರು ಮದುವೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಗ್ಲೆನ್ ಮ್ಯಾಕ್ಸವೆಲ್ ಅವರು ಸದ್ಯಕ್ಕೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ 15 ನೇ ಆವೃತ್ತಿಯಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟಾರೆಯಾಗಿ ಆಸ್ಟ್ರೇಲಿಯಾದ ಒಬ್ಬ ಖ್ಯಾತ ಆಟಗಾರ ಭಾರತದ ಅಳಿಯನಾಗುತ್ತಿರುವುದು ಒಂದು ರೀತಿಯ ಸಂತಸದ ವಿಚಾರವಾಗಿದೆ ಎಂದರೆ ತಪ್ಪಾಗಲಾರದು.

Leave a Reply

%d bloggers like this: