ನಿರ್ಮಾಪಕನ ಜೊತೆ ಮದುವೆಗೆ ತಯಾರಾದ ಮತ್ತೊಬ್ಬ ಸ್ಟಾರ್ ನಟಿ

ಬಾಲಿವುಡ್ ನಿರ್ಮಾಪಕ ಹಾಗೂ ನಟ ಜಕ್ಕಿ ಬಗ್ ನಾನಿ ಮತ್ತು ನಟಿ ರಾಕುಲ್ ಪ್ರೀತ್ ಸಿಂಗ್ ಡೇಟಿಂಗ್ ವಿಚಾರ ಹೊಸದೇನೂ ಅಲ್ಲ. ಸದಾ ಅಂಟಿಕೊಂಡೇ ಓಡಾಡುತ್ತಿದ್ದ ಈ ಜೋಡಿಯ ಮದುವೆ ವಿಚಾರ ನೂರಾರು ಬಾರಿ ಗಾಸಿಪ್ ಕಾಲಂನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಂತೂ ಹಲವು ಬಾರಿ ಇವರ ಮದುವೆಯನ್ನೂ ಮಾಡಲಾಗಿದೆ.

ಆದರೆ, ಈ ಬಾರಿ ಈ ಜೋಡಿಯ ಮದುವೆಯ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿದೆ. ರಾಕುಲ್ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬುದು ಲೇಟೆಸ್ಟ್ ಮಾಹಿತಿ. ಈ ಹಿಂದೆಯೂ ರಾಕುಲ್ ಮದುವೆ ಬಗ್ಗೆ ವದಂತಿ ಹಬ್ಬಿತ್ತು. ಹಿಂದಿಯ ಯುವ ನಿರ್ಮಾಪಕ ಮತ್ತು ನಟ ಜಾಕಿ ಭಗ್ನಾನಿ ಅವರನ್ನು ರಾಕುಲ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಮದುವೆ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಅವರು ತಮ್ಮ ಪ್ರೇಮ ಸಂಬಂಧವನ್ನು ಮದುವೆಯ ಹಂತಕ್ಕೆ ತರಲಿದ್ದಾರೆ. ಈ ಬಗ್ಗೆ ರಾಕುಲ್ ಶೀಘ್ರದಲ್ಲೇ ಹೇಳಿಕೆ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮೇ ತಿಂಗಳಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರದಲ್ಲಿ ಈ ಜೋಡಿ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.