ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಬಗ್ಗೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಹೀಗಿದೆ

ನನ್ನ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಕೂಡ ಒಂದು. ಉತ್ತಮ ಆರೋಗ್ಯ ಪ್ರತಿಯೊಬ್ಬರ ಹಕ್ಕು. ಉತ್ತರ ಕನ್ನಡ ಜಿಲ್ಲೆಯ ಜನತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ನಾನು ಮತ್ತು ನಮ್ಮ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇತ್ತೀಚೆಗೆ ಶಿರೂರು ಟೋಲ್ ಬಳಿ ನಡೆದ ಭೀಕರ ಆಂಬುಲೆನ್ಸ್ ಅಪಘಾತ ಕುರಿತು ಮತ್ತೆ ಇಂತಹ ದುರ್ಘಟನೆ ಮತ್ತೆ ನಡೆಯಬಾರದು. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಇರುವಂತಹ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಕಲ ಸೌಲಭ್ಯ ಸೌಕರ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗಬೇಕು. ಏನಾದರು ತಕ್ಷಣ ತುರ್ತು ಆರೋಗ್ಯ ಪರಿಸ್ಥಿತಿ ಎದುರಾದ ಸಂಧರ್ಭದಲ್ಲಿ.

ಉತ್ತರ ಕನ್ನಡ ಜಿಲ್ಲೆಯ ಜನ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಅಂತಹ ಜಿಲ್ಲೆಗಳಿಗೆ ಹೋಗಬೇಕಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ರೀತಿ ಅಪಘಾತವಾದಾಗ ಅವರು ಎಲ್ಲಿ ಹೋಗಬೇಕು. ರೀತಿ ದುರ್ಘಟನೆಗಳು ಸಂಭವಿಸಿದಾಗಲೆಲ್ಲಾ ಇನ್ನೆಷ್ಟು ಜನ ಪ್ರಾಣ ತ್ಯಜಿಸಬೇಕು. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಪಡೆಯುವ ಹಕ್ಕು ಇದೆ. ಉತ್ತರ ಕನ್ನಡ ಜನತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೇಳುತ್ತಿರುವುದು ನ್ಯಾಯಯುತವಾಗಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವರಾದ ಡಾಕೆ ಸುಧಾಕರ್ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಿಸ್ತು ಕ್ರಮ ವಹಿಸಿ ಗಮನ ಹರಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

ಇನ್ನು ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರುವ ಮುನ್ನ ರಾಜ್ಯದಲ್ಲಿ ಎಲ್ಲಾ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾಡಳಿತ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸಿ ರಾಜ್ಯದಲ್ಲಿ ಎಲ್ಲಾ ಜನರಿಗೂ ಉಚಿತವಾಗಿ ಉತ್ತಮ ಆರೋಗ್ಯ ಚಿಕಿತ್ಸೆ ಆಗುವ ಹಾಗೇ ಮಾಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿತ್ತು. ಆದರೆ ನಂತರದ ದಿನಗಳಲ್ಲಿ ಇದು ಭರವಸೆಯಾಗಿ ಉಳಿದಿದೆ. ಕೋವಿಡ್ ಪ್ರಕರಣಗಳು ಕಡಿಮೆ ಆದಾಗಿನಿಂದ ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ, ವೆಂಟಿಲೇಟರ್ ಒಳಗೊಂಡಂತೆ ವೈದ್ಯಕೀಯ ಉಪಕರಣಗಳ ಸೂಕ್ತ ನಿರ್ವಹಣೆ ಇಲ್ಲದೆ ಉಪಕರಗಳು ಧೂಳಿಡಿದು ಕೂತಿವೆ. ಇನ್ನು ಯಾವಾಗ ಶಿರೂರು ಟೋಲ್ ಬಳಿ ನಡೆದ ಭೀಕರ ಅಪಘಾತ ಆದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನ ಆರಂಭವಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಈ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ.

Leave a Reply

%d bloggers like this: