ವಿಕ್ರಾಂತ್ ರೋಣ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅವರಿಗೆ ಈಗ ಮತ್ತೊಂದು ಖುಷಿಯ ಸುದ್ದಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಕಲಾ ಕ್ಷೇತ್ರದ ಸಾಧನೆಗಾಗಿ ಭಾರತೀಯ ಅಂಚೆ ಇಲಾಖೆ ವಿಶೇಷವಾದ ಗೌರವ ನೀಡುತ್ತಿದೆ. ಹೌದು ಭಾರತೀಯ ಅಂಚೆ ಇಲಾಖೆಯು ನಟ ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಮತ್ತು ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಸದುದ್ದೇಶದಿಂದಾಗಿ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುತ್ತಿದೆ. ಅದೇ ರೀತಿಯಾಗಿ 25 ವರ್ಷಗಳ ಸಿನಿ ಜರ್ನಿಯನ್ನು ಸಂಪೂರ್ಣಗೊಳಿಸಿರುವ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಶ್ರೀ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದಾರೆ.

ಅದರ ಜೊತೆಗೆ ಸುದೀಪ್ ಅವರಿಂದ NOC ನಿರಪೇಕ್ಷಣಾ ಪತ್ರವನ್ನು ಕೂಡ ಪಡೆದಿದ್ದಾರೆ. ಇನ್ನು ಈ ಅಂಚೆ ವಿಶೇಷ ಲಕೋಟೆ ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಸುದೀಪ್ ಅವರನ್ನ ಸಾಂಪ್ರದ ಹೂಗುಚ್ಚ ನೀಡಿ ಆತ್ಮೀಯವಾಗಿ ಆಹ್ವಾನಿಸಿಲಾಗಿದೆ. ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭವು ಆದಷ್ಟು ಬೇಗ ಶೀಘ್ರದಲ್ಲಿಯೇ ನೆರವೇರಲಿದೆ ಎಂದು ಇಲಾಖೆ ತಿಳಿಸಿದೆ. ಕಿಚ್ಚ ಸುದೀಪ್ ಅವರ ಸಾಧನೆಗಳನ್ನು ಗುರುತಿಸಿ ಈ ವಿಶೇಷ ಅಂಚೆ ಲಕೋಟೆ ಮೂಲಕ ಗೌರವ ಸಲ್ಲಿಸುತ್ತಿರುವ ಭಾರತೀಯ ಅಂಚೆ ಇಲಾಖೆಯನ್ನು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಮತ್ತು ಕನ್ನಡ ಸಿನಿ ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಹೃದಯತುಂಬಿ ಶ್ಲಾಘಿಸುತ್ತಿದ್ದಾರೆ. ಈ ಸುದ್ದಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಅಪಾರ ಸಂತೋಷವನ್ನುಂಟು ಮಾಡಿದೆ. ಇನ್ನು ಸುದೀಪ್ ಅವರು ವಿಕ್ರಾಂತ್ ರೋಣ ಸಿನಿಮಾದ ಯಶಸ್ಸಿನಲ್ಲಿದ್ದು, ಸದ್ಯಕ್ಕೆ ಮನೆಯಲ್ಲಿಯೇ ಇದ್ದು ಕುಟುಂಬದೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ.